Author's posts

ಬಿನಾಯಕ್ ಸೆನ್ ಅವರನ್ನು ಬೆಂಬಲಿಸಿ

[dropcap]ಮಾ[/dropcap]ನವ ಹಕ್ಕುಗಳ ಹೋರಾಟಗಾರ ಡಾ. ಬಿನಾಯಕ್‌ಸೇನ್ ಅವರಿಗೆ ಚತ್ತೀಸ್‌ಘಡ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದುದಕ್ಕೆ ವಿರುದ್ದವಾಗಿ ದೇಶದಾದ್ಯಂತ ಖಂಡನೆಗಳು ವ್ಯಕ್ತವಾಗಿವೆ. ಈ ಶಿಕ್ಷೆಯ ವಿರುದ್ಧ ಅವರ ಮೇಲ್ಮನವಿಯನ್ನು ಉಚ್ಛ ನ್ಯಾಯಾಲಯವೂ ತಿರಸ್ಕರಿಸಿತ್ತು. ಆ ಬಗ್ಗೆ ಸರ್ವೋಚ್ಛ ನ್ಯಾಯಾಲಯಕ್ಕೆ ಅವರು ನೀಡಿದ್ದ ಜಾಮೀನು ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡು ಅವರಿಗೆ ಜಾಮೀನು ನೀಡಿದೆ ಮಾತ್ರವಲ್ಲದೆ ಅವರು ಯಾವುದೇ ದೇಶದ್ರೋಹದ ಕೆಲಸವನ್ನು ಮಾಡಿರುವುದು ತೋರುವುದಿಲ್ಲ ಎಂದು ಪರಿಗಣಿಸಿ ಅವರನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಆಜ್ಞಾಪಿಸಿರುವುದು ಮಾನವ ಹಕ್ಕುಗಳ ಹೋರಾಟಗಾರರೆಲ್ಲರ ಪ್ರಶಂಸೆಗೆ …

Continue reading

ಬೀದಿ ನಾಯಿಗಳ ಕಾಟ

[dropcap]ಬೆಂ[/dropcap]ಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯೊಳಗೆ ಮಾನವರಿಗಿಲ್ಲದ ರಕ್ಷಣೆಯನ್ನು ಬೀದಿ ನಾಯಿಗಳಿಗೆ ಪ್ರಾಣಿದಯೆಯ ಹೆಸರಲ್ಲಿ ನಗರಾಡಳಿತವು ನೀಡುತ್ತಿರುವುದು ಕೂಲಿನಾಲಿ ಮಾಡಿಕೊಂಡು ಬದುಕುತ್ತಿರುವ ಕಡು ಬಡವರ ಪಾಲಿಗೆ ಮಾರಕವಾಗಿದೆ. ಇವರ ಮಕ್ಕಳಿಗೆ ಯಾರ ದಯೆಯೂ ಇಲ್ಲ, ಯಾರ ರಕ್ಷಣೆಯೂ ಇಲ್ಲ, ಯಾರ ಪೋಷಣೆಯೂ ಇಲ್ಲ ಎಂದಾಗಿರುವುದು ಆಡಳಿತದ ಧೋರಣೆಯ ಪರಿಣಾಮವಾಗಿದೆ. ಹಳ್ಳಿಗಾಡುಗಳಿಂದ ಹೊಟ್ಟೆಹೊರೆಯಲು ನಗರ ವ್ಯಾಪ್ತಿಯೊಳಗೆ ಬಂದು ಕೂಲಿ ನಾಲಿಯ ಕೆಲಸ ಮಾಡಿಕೊಂಡು ಅಂಗಡಿ ಮುಂಗ್ಗಟ್ಟುಗಳಲ್ಲಿಯೋ ರಸ್ತೆ ಬದಿಗಳಲ್ಲಿಯೋ ಅರೆ ಬರೆ ನಿರ್ಮಾಣವಾಗಿರುವ ಕಟ್ಟಡಗಳ ಇಟ್ಟಿಗೆ ರಾಶಿಗಳೊಳಗೋ ಆಶ್ರಯ ಪಡೆಯುವ …

Continue reading

ಭಗವದ್ಗೀತೆಯನ್ನು ಶಾಲಾಮಕ್ಕಳಿಗೆ ಬೋಧಿಸುವ ಪ್ರಸ್ತಾಪದ ಕುರಿತು ಒಂದು ಅವಲೋಕನ

[dropcap]ಭ[/dropcap]ಗವದ್ಗೀತೆಯು ಒಂದು ಉತ್ತಮ ಸಾಹಿತ್ಯಿಕ ಕೃತಿ ಎನ್ನುವುದು ನಿಜ ಮತ್ತು ಅದು ಯಾರನ್ನಾದರೂ ಮನ ಮೆಚ್ಚಿಸುವ ಸಾಮರ್ಥ್ಯವಿರುವ ಒಂದು ಸುಂದರ ಕವನ ಗುಚ್ಛವಾಗಿದೆ. ಆದರೆ ಅದರಲ್ಲಿ ಪರಸ್ಪರ ವೈರುಧ್ಯದ ಹಲವು ಆಶಯಗಳು ಮತ್ತು ಉಪದೇಶಗಳು ಅಡಕವಾಗಿವೆ.  ಈ ಗೀತೆಯು ಒಂದು ಧರ್ಮದ ಸಲುವಾಗಿ ನಡೆದ ಧರ್ಮಯುದ್ಧದ ಭಾಗವಾಗಿದೆ ಎಂಬ ಭಾವನೆಯನ್ನು ಹುಟ್ಟಿಸುವುದಕ್ಕೆ ಆರಂಭದಿಂದಲೇ ತಂತ್ರಗಳು ನಡೆದಿದ್ದುದನ್ನು ನಾವು ಕಾಣಬಹುದು. ಇದರಲ್ಲಿ ನಮ್ಮ ನಿಮ್ಮೆಲ್ಲರನ್ನು ಆಕರ್ಷಿಸುವ ಕೃಷ್ಣನು ಬೋಧಿಸುವ ಧರ್ಮ ಯುದ್ಧವು ಅಧರ್ಮದ ವಿರುದ್ಧದ ಯುದ್ದ ಅಲ್ಲ, ಬದಲಿಗೆ …

Continue reading