[dropcap]ಆ[/dropcap]ಪರೇಶನ್ ಕಮಲದ ಮೂಲಕ ಅಧಿಕಾರದ ಪೀಠವನ್ನೇರಿದ ಮಾನ್ಯ ಯೆಡ್ಯೂರಪ್ಪನವರು ಏರಿದ್ದ ಪೀಠವನ್ನು ಉಳಿಸಿಕೊಳ್ಳುವುದು ತಮ್ಮ ಹಕ್ಕು ಎಂಬಂತೆ ವರ್ತಿಸುತ್ತಾ ರಾಜ್ಯಪಾಲರು, ಲೋಕಾಯುಕ್ತರು, ನ್ಯಾಯಾಲಯಗಳು ಮುಂತಾದವರನ್ನೆಲ್ಲಾ ಕಡೆಗಣಿಸಿ, ತಮ್ಮ ಅಧಿಕಾರಕ್ಕೆ ಏನೆಲ್ಲಾ ಒಳಪಟ್ಟಿದೆಯೋ ಆ ಎಲ್ಲ ಕ್ರಮಗಳನ್ನು ಕೈಗೊಂಡರೂ ಸಹಾ ಅಧಿಕಾರವನ್ನು ಉಳಿಸಿಕೊಳ್ಳಲಾಗದೆ ಇದೀಗ ನ್ಯಾಯಾಲಯದ ಕಟಕಟೆಯಲ್ಲಿ ನಿಂತು ತನ್ನ ವರ್ತನೆಗೆ ತಕ್ಕ ಉತ್ತರ ನೀಡಬೇಕಾಗಿದೆ. ಅವರ ಜೊತೆಯಲ್ಲೇ ಅವರ ಮಂತ್ರಿಮಂಡಲದಲ್ಲಿ ಮುಖ್ಯ ಖಾತೆಗಳನ್ನು ವಹಿಸಿಕೊಂಡಿದ್ದ ಜನಾರ್ಧನ ರೆಡ್ಡಿ ಮತ್ತವರ ಸಂಬಂಧಿ ಶ್ರೀನಿವಾಸ ರೆಡ್ಡಿಯವರು ಕರ್ನಾಟಕದಲ್ಲಿ ಎಷ್ಟು ಹಾರಾಡಿ ಕಣ್ಣ ಮುಚ್ಚಾಲೆ …
Category: Articles : ಬರಹಗಳು
Aug 22
ಜನ ಲೋಕಪಾಲ್ ಒಂದೇ ಸಾಲದು; ಸರ್ವರಿಗೂ ನೈಜ ಅಧಿಕಾರ ದೊರೆಯಲಿ
[dropcap]ನಾ[/dropcap]ವಿಂದು ಬಹು ದೊಡ್ಡ ಜನಾಂದೋಲನವನ್ನು ಕಾಣುತ್ತಿದ್ದೇವೆ. ಇದು ಪೂರ್ಣ ಸ್ವಾತಂತ್ರ್ಯದ ಎರಡನೇ ಆಂದೋಲನ ಎಂದು ಈಗಾಗಲೇ ಕರೆಯಲ್ಪಟ್ಟಿದೆ. ಈ ಆಂದೋಲನಕ್ಕೆ ದುರಾಳಿತ ನಡೆಸಿದ ಕಾಂಗ್ರೆಸ್ ಪಕ್ಷವು ಕಾರಣವಾಗಿದ್ದರೆ ಅದರ ದುರ್ಲಾಭವನ್ನು ಪಡೆಯಲು ಅದಕ್ಕಿಂತಲೂ ಭ್ರಷ್ಠವಾದ, ಬಂಡವಾಳವಾದಿ ಪ್ರತಿಗಾಮಿ ಪಕ್ಷಗಳಾದ ಭಾಜಪ ಮತ್ತು ಸಂಘಪರಿವಾರಗಳು ಹೊಂಚುಹಾಕುತ್ತಿರುವುದನ್ನು ಕಾಣುತ್ತೇವೆ. ಅಣ್ಣಾ ಹಜಾರೆಯವರ ತಂಡದವರು ಸಚ್ಚಾರಿತ್ರರು ಎಂದಾದರೂ ಜನಾಂದೋಲನವು ಯಶಸ್ವಿಯಾಗಿ ಅಧಿಕಾರವು ಪ್ರತಿಗಾಮಿ ಪಕ್ಷಗಳ ಹಿಡಿತಕ್ಕೊಳಗಾದರೆ ಜನರಿಗೆ ಜನಲೋಕಪಾಲ ಮಸೂದೆಯಿಂದ ಎಷ್ಟು ಒಳಿತು ಆಗಬಲ್ಲುದೋ ಅದರ ಶತ ಪಾಲು ಸಂಕಷ್ಟಗಳು ಬಂದೊದಗಿ …
Aug 18
ಉರುಳು ಸೇವೆಯ ಬದಲಿಗೆ ಜನಸೇವೆ ಮಾಡಿ
[dropcap]ಕಾಂ[/dropcap]ಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ, ಅಮೆರಿಕಾದ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಪರಿಣತ ತಜ್ಞರ ಚಿಕಿತ್ಸೆಯನ್ನು ಪಡೆಯುತ್ತಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ಅವರಲ್ಲಿ ಸದ್ಭಾವನೆಯುಳ್ಳವರೆಲ್ಲರೂ ಅವರು ಶೀಘ್ರ ಗುಣಮುಖರಾಗಲಿ ಎಂಬ ಕಳಕಳಿಯನ್ನು ಹೊಂದಿರುವುದೂ ಪ್ರಕಟವಾಗಿದೆ. ಅದು ಸಹಜವೂ ಹೌದು. ಅಮೆರಿಕಾದ ತಜ್ಞ ವೈದ್ಯರು ಸೂಕ್ತ ಚಿಕಿತ್ಸೆಯನ್ನು ನೀಡುವುದರಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶ್ರೀಮತಿ ಸೋನಿಯಾ ಗಾಂಧಿಯವರಾಗಲಿ, ಚಿಕಿತ್ಸೆಯನ್ನು ನೀಡುವ ವೈದ್ಯರಾಗಲಿ ಯಾವುದೇ ದೇವಾಲಯಗಳಲ್ಲಿ, ಇಗರ್ಜಿ, ಮಸೀದಿಗಳಲ್ಲಿ ಯಾವುದೇ ತರದ ಹರಕೆಯನ್ನಾಗಲೀ ಪ್ರಾರ್ಥನೆಯನ್ನಾಗಲೀ ಮಾಡಿಕೊಂಡ ವರದಿ ಪ್ರಕಟವಾಗಲಿಲ್ಲ. ವೈದ್ಯರು ವೈಜ್ಞಾನಿಕ ಚಿಕಿತ್ಸಾ ಕ್ರಮಗಳನ್ನು ಮಾತ್ರ …